logo
WhatsApp Image 2026-04-02 at 14.46.04.jpeg
hindalco everlast.jpeg

ಜೂ.25ರಿಂದ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
22 Jun 2023
post image

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡಿದ್ದರು, ನೀರಿಕ್ಷೆಯಷ್ಟು ಮಳೆ ಬೀಳದೆ ರೈತರಲ್ಲಿ ಆತಂಕ ಮೂಡಿತ್ತು. ಆದರೆ ರಾಜ್ಯಾದ್ಯಂತ ಜೂನ್ 25ರಿಂದ ಮುಂಗಾರು ಚುರುಕುಗೊಳ್ಳಲಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜೂ.25 ರಿಂದ ಕೆಲ ರಾಜ್ಯದ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇದರೊಂದಿಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ .

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ರಾಜ್ಯದ ಹಲವಾರು ಭಾಗಗಳಲ್ಲಿ ಅಲ್ಪ ಸ್ವಲ್ಪ ಮಳೆಯಾಗುತ್ತಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.