logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುವ ಸಾಧ್ಯತೆ..

ಟ್ರೆಂಡಿಂಗ್
share whatsappshare facebookshare telegram
2 Jun 2023
post image

ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಇಂದು ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನೈಋತ್ಯ ಮಾನ್ಸೂನ್ ಪ್ರತಿ ಬಾರಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.

ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂಗಾರು ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1 ರಂದು ದೇವರ ನಾಡು ದಕ್ಷಿಣ ರಾಜ್ಯ ಪ್ರವೇಶಿಸಿತ್ತು. ಈ ಬಾರಿ ವಾರದ ಬಳಿಕ ಕರ್ನಾಟಕ ಪ್ರವೇಶಿಸುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.