logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
1 Jun 2023
post image

ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗಲಿದೆ. ಕಲಬುರಗಿಯಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಬಿರುಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.