logo
WhatsApp Image 2026-04-02 at 14.46.04.jpeg
hindalco everlast.jpeg

ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೆ ಭಾರೀ ಮಳೆ

ಟ್ರೆಂಡಿಂಗ್
share whatsappshare facebookshare telegram
30 Jun 2023
post image

ಬೆಂಗಳೂರು: ಕರ್ನಾಟಕದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕುಂದಾಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ, ಕ್ಯಾಸಲ್ ರಾಕ್, ಶಿರಾಲಿ, ಗೋಕರ್ಣ, ಅಂಕೋಲಾ, ಕಾರವಾರ, ಕೊಲ್ಲೂರು, ಕದ್ರಾ, ಹೊನ್ನಾವರ, ಕುಮಟಾ, ಕೋಟ, ಸಿದ್ದಾಪುರ, ಗೇರುಸೊಪ್ಪ, ಮಂಕಿ, ಪಣಂಬೂರು, ಸುಬ್ರಹ್ಮಣ್ಯ, ಮಾನಿ, ಮುಲ್ಕಿ, ಮಂಗಳೂರು, ಉಡುಪಿ, ಕಾರ್ಕಳ, ಸಿದ್ದಾಪುರ,ಯಲ್ಲಾಪುರ, ಲೋಂಡಾ, ತಾಳಗುಪ್ಪ, ಲಿಂಗನಮಕ್ಕಿ, ಕೊಪ್ಪದಲ್ಲಿ ಮಳೆಯಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.