logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಮತ್ತೆ ಹುರುಪುಗೊಂಡ ಮಳೆ, ಕರಾವಳಿ ಸೇರಿದಂತೆ ಮಲೆನಾಡಿಗೂ ಭಾರೀ ಮಳೆಯ ಮುನ್ಸೂಚನೆ

ಟ್ರೆಂಡಿಂಗ್
share whatsappshare facebookshare telegram
23 Jul 2026
post image

ಬೆಂಗಳೂರು: ಕರ್ನಾಟಕದಲ್ಲಿ (Karnataka) ಮುಂಗಾರು (Monsoon) ಮತ್ತೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ದಾವಣಗೆರೆ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.