



ತಿರುವನಂತಪುರಂ: ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದಾಗಿ ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಕೊಟ್ಟಾಯಂನಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿದ್ದು, 13ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ,ಮಳೆಯಿಂದ ಕೊಟ್ಟಾಯಂನ ಕೂಟ್ಟಿಕಲ್ ಗ್ರಾಮದಲ್ಲಿ 3 ಮನೆಗಳು ಹಾಗೂ ಅಂಗಡಿಗಳು ಕೊಚ್ಚಿ ಹೋಗಿವೆ. ಕೇರಳದಲ್ಲಿ ಬೇರೆ ಜಿಲ್ಲೆಗಳಿಗಿಂತಲೂ ಕೊಟ್ಟಾಯಂ ಮತ್ತು ಪಥನಾಂತಿಟ್ಟ ಹೆಚ್ಚು ಹಾನಿಗೊಳಗಾಗಿವೆ. ಮಳೆಯಿಂದ ರಸ್ತೆಗಳೆಲ್ಲ ನದಿಯಂತಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.