



ವೆಲ್ಲೂರು ತಮಿಳು ನಾಡು: ಭಾರೀ ಮಳೆಗೆ ಗೋಡೆ ಕುಸಿದು ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಪೆರ್ನಂಪಟ್ಟು ಪ್ರದೇಶದಲ್ಲಿ ನಡೆದಿದೆ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಘಟನೆಯಲ್ಲಿ ಸಾವನ್ನಪ್ಪಿದ ಒಂಬತ್ತು ಜನರ ಕುಟುಂಬಗಳಿಗೆ 5 ಲಕ್ಷ ರೂ.,ಗಾಯಗೊಂಡವರಿಗೆ 50,000 ರೂಪಾಯಿ ನೀಡಲಾಗುವುದು ಎಂದು ಹೇಳಿದ್ದಾರೆ. ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಶುಕ್ರವಾರವೂ ತಮಿಳುನಾಡಿನ ಉತ್ತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಶಾಲ ಕಾಲೇಜು ಗಳಿಗೆ ರಜೆ ಸಾರಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.