logo
WhatsApp Image 2026-04-02 at 14.46.04.jpeg
hindalco everlast.jpeg

9 ಜಿಲ್ಲೆಗಳಲ್ಲಿ ಜೂನ್ 2 ರವರೆಗೆ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
29 May 2023
post image

ಬೆಂಗಳೂರು:ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ರಾಯಚೂರಿನಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ, ಬೇಲೂರು, ಹುಣಸೂರು, ಕಳಸ, ಶಿರಾಲಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.