logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ: ಅನಾರೋಗ್ಯ ದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
13 Sept 2022
post image

ಹೆಬ್ರಿ : ಅನಾರೋಗ್ಯ ಪೀಡಿತ ರಾಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ಘಟನೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಕೊಂಕಣಾರಬೆಟ್ಟು ಎಂಬಲ್ಲಿ ನಡೆದಿದೆ.ನಾರಾಯಣ ಶೆಟ್ಟಿಗಾರ್ (63ವ) ಆತ್ಮಹತ್ಯೆ ಮಾಡಿಕೊಂಡವರು.

ಅವರು ಸುಮಾರು 20 ವರ್ಷಗಳಿಂದ ಚರ್ಮದ ಅಲರ್ಜಿ ಕಾಯಿಲೆಯಿಂದ ಬಳಲುತ್ತಿದ್ದು, ಮಣಿಪಾಲ ಕೆ.ಎಂ.ಸಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅಷ್ಟೇ ಅಲ್ಲದೆ ಅವರಿಗೆ ಮೊಣಗಂಟು ನೋವಿನ ಸಮಸ್ಯೆಯೂ ಇದ್ದು, ಕಳೆದ ಒಂದೂವರೆ ವರ್ಷದಿಂದ ನೋವು ಉಲ್ಬಣಗೊಂಡ ಕಾರಣ ಅವರು ಮಾನಸಿಕವಾಗಿ ನೊಂದಿದ್ದರು. ಇದೇ ಕಾರಣಕ್ಕೆ ಖಿನ್ನತೆಗೊಳಗಾಗಿದ್ದ ಅವರು ಜೀವನದಲ್ಲಿ ಜಿಗುಪ್ಪೆಗೊಂಡು ಮಂಗಳವಾರ ಬೆಳಿಗ್ಗೆ ತಮ್ಮ ಮನೆಯ ಪಕ್ಕದಲ್ಲಿರುವ ಚಪ್ಪರದ ಮೇಲಿನ ಎಳವಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.