logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ : ಕುಸಿದು ಬಿದ್ದು ಮಹಿಳೆ ಸಾವು

ಟ್ರೆಂಡಿಂಗ್
share whatsappshare facebookshare telegram
24 Mar 2023
post image

ಕಾರ್ಕಳ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಮುದ್ದೂರು ಎಂಬಲ್ಲಿ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುನ ಘಟನೆ ಮಾ.23ರಂದು ನಡೆದಿದೆ.

ಮುದ್ದೂರಿನ ರತ್ನಾ (58) ಮೃತಪಟ್ಟವರು. ಅವರು ಕಳೆದ 3 ವರ್ಷಗಳಿಂದ ಲೋ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದರು. ಎಂದಿನAತೆ ಮಾ.2ರಂದು ರಾತ್ರಿ 7 ಗಂಟೆಯ ವೇಳೆಗೆ ಸ್ನಾನ ಮಾಡಿ ಬರುತ್ತಿದ್ದಾಗ ಲೋ ಬಿಪಿ ಉಂಟಾಗಿ ಕುಸಿದು ಬಿದ್ದಿದ್ದರು. ಅದೇ ವೇಳೆ ಪಕ್ಕದಲ್ಲಿಯೇ ಇದ್ದ ಒಲೆಯಲ್ಲಿದ್ದ ಬೆಂಕಿ ತಗುಲಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಅವರು ಮೃತಪಟ್ಟಿದ್ದರು.

ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.