



ಕಾರ್ಕಳ : ಚಾಲಕ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾದ ಘಟನೆ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಬ್ಯಾಣ ಎಂಬಲ್ಲಿ ಜ೧೨ ರಂದು ನಡೆದಿದೆ. ಅಪಘಾತದಲ್ಲಿ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕ್ಕಮಗಳೂರಿನ ಶೃಂಗೇರಿ ಯವರಾಗಿದ್ದಾರೆ. ಚಾಲಕ ಸಹಿತ ಐವರು ಎರ್ಟಿಗಾ ಕಾರಿನಲ್ಲಿ ಆಗುಂಬೆ ಘಾಟಿಯಿಂದ ಉಡುಪಿ ಕಡೆಗೆ ಬರುತ್ತಿದ್ದರು. ಹೆಬ್ರಿಯ ಶಿವಪುರದ ಸಮೀಪದ ಬ್ಯಾಣ ತಲುಪಿದಾಗ ಚಾಲಕನು ವೇಗದಿಂದ ಅಜಾಗರೂಕತೆಯಿಂದ ಚಲಾಯಿಸುತಿದ್ದಾಗ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಚಾಲಕ ಸಹಿತ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯವಾಗಿದೆ . ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.