



ಹೆಬ್ರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಕುಂಜಿಬೆಟ್ಟು–ಉಡುಪಿ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬೀದಿ ನಾಟಕದ ಮೂಲಕ ಆರೋಗ್ಯ ಶಿಕ್ಷಣ ಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ, ಹೆಬ್ರಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಬೀದಿ ನಾಟಕದ ಮೂಲಕ ವಿದ್ಯಾರ್ಥಿಗಳಿಗೆ ಆರೋಗ್ಯ ಸಂರಕ್ಷಣೆ, ಸ್ವಚ್ಛತೆ, ರೋಗ ನಿರೋಧಕ ಕ್ರಮಗಳು ಹಾಗೂ ಮಾನಸಿಕ ಆರೋಗ್ಯದ ಮಹತ್ವ ಕುರಿತು ಅರಿವು ನೀಡಲಾಯಿತು. ಬಳಿಕ ಹೆಬ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಚಿದಾನಂದ್ ಅವರು ಮಾತನಾಡಿ, ಮಕ್ಕಳ ಆರೋಗ್ಯ ರಕ್ಷಣೆ ಹಾಗೂ ಮಾನಸಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಅಗತ್ಯವಿರುವ ವಿವಿಧ ಮಾಹಿತಿಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಎಸ್.ಆರ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್, ಎಸ್.ಆರ್. ಪಬ್ಲಿಕ್ ಸ್ಕೂಲಿನ ಉಪಪ್ರಾಂಶುಪಾಲರಾದ ದೀಪಕ್ ಎನ್., ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.