



ಹೆಬ್ರಿ: ವ್ಯಕ್ತಿ ಒಬ್ಬರು ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾದ ಘಟನೆ ಚಾರ ಗ್ರಾಮದಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಚಾರ ಗ್ರಾಮದ ನಿವಾಸಿ ಆನಂದ (55) ಎಂದು ಗುರುತಿಸಲಾಗಿದೆ.
ಆನಂದ ಹೊಟೇಲ್‌ನಲ್ಲಿ ಕ್ಲೀನಿಂಗ್ ಕೆಲಸ ಮಾಡಿಕೊಂಡಿದ್ದು, ಜೂ. 7ರಂದು ಸಂಜೆ 4 ಗಂಟೆಗೆ ಹೊಟೇಲ್ ಕೆಲಸಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೋದವರು ಕೆಲಸಕ್ಕೂ ಹೋಗದೆ ಮನೆಗೂ ಬಾರದೇ ಕಾಣೆಯಾಗಿರುತ್ತಾರೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.