



ಉಡುಪಿ: ರಾಷ್ಟ್ರೀಯ ಹೆದ್ದಾರಿ - 169A ಹೆಬ್ರಿ - ಪರ್ಕಳ - ಕರಾವಳಿ ಜಂಕ್ಷನ್ - ಮಲ್ಪೆ ವರೆಗಿನ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ 355.72 ಕೋಟಿ ರೂಪಾಯಿ ಮಂಜೂರಾಗಿದ್ದು, ಈ ಕಾಮಗಾರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಪೆರ್ಡೂರಿ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.