



ಕಾರ್ಕಳ: ಪ್ರಿಯಕರ ಪೋನ್ ಕರೆಯನ್ನು ಸ್ವೀಕರಿಸಿಲ್ಲವೆಂದು ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯಲ್ಲಿ ನಡೆದಿದೆ. ಕುಸುಮಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಕುಸುಮಾರವರು ಸಂತೆಕಟ್ಟೆಯಲ್ಲಿ ಹೋಂ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದು ಚಿಕ್ಕ ಮಗಳೂರು ಜಿಲ್ಲೆಯ ಯುವಕನನ್ನು ಪ್ರೀತಿಸುತ್ತಿದ್ದರು.
ಆತನು ಆಕೆಯ ಪೋನ್ ಕರೆಯನ್ನು ಸ್ವೀಕರಿಸದ ಕಾರಣ ಹಾಗೂ ಇನ್ನು ಮುಂದಕ್ಕೆ ಆತನು ತನಗೆ ಸಿಕ್ಕುವುದಿಲ್ಲವೆಂದು ಬೇಸರಗೊಂಡು ಎ.11 ರಂದು ಬೆಳಿಗ್ಗೆ ವಿಷ ಪದಾರ್ಥವನ್ನು ಹಾಲಿನಲ್ಲಿ ಬೆರೆಸಿ ಕುಡಿದಿದ್ದರು.ಬಳಿಕ ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.