logo
WhatsApp Image 2026-04-02 at 14.46.04.jpeg
hindalco everlast.jpeg

ಹಲೋ ಕಂದಾಯ ಸಚಿವರೇ, ಸಹಾಯವಾಣಿ ಮೂಲಕ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ

ಟ್ರೆಂಡಿಂಗ್
share whatsappshare facebookshare telegram
10 Jun 2022
post image

ಉಡುಪಿ,:: ಕಂದಾಯ ಇಲಾಖೆಯ ವಿನೂತನ ಯೋಜನೆಯಾದ ಹಲೋ ಕಂದಾಯ ಸಚಿವರೇ ಸಹಾಯವಾಣಿ ಸಂಖ್ಯೆ 155245 ಗೆ ಉಚಿತವಾಗಿ ಕರೆ ಮಾಡುವ ಮೂಲಕ ಕುಟುಂಬದ ವಾರ್ಷಿಕ ಆದಾಯ 32,000 ರೂ. ಕ್ಕಿಂತ ಕಡಿಮೆ ಇರುವ ವೃದ್ಧರು, ವಿಶೇಷ ಚೇತನರು, ವಿಧವೆಯರು ಹಾಗೂ ಅವಿವಾಹಿತ ಅಥವಾ ವಿಚ್ಚೇಧಿತ ಮಹಿಳೆಯರು ಮಾಸಿಕ ಪಿಂಚಣಿ ಸೌಲಭ್ಯಕ್ಕಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಒದಗಿಸಿ, ಕೋರಿಕೆ ಸಲ್ಲಿಸಬಹುದಾಗಿದೆ.

ಈ ಯೋಜನೆಯಡಿ ಪಿಂಚಣಿ ಕೋರಿಕೆ ಸ್ವೀಕರಿಸಿದ 72 ಗಂಟೆಗಳಲ್ಲಿ ಅರ್ಹರಿಗೆ ಪಿಂಚಣಿ ಮಂಜೂರಾತಿ ಮಾಡಿ ಮನೆ ಬಾಗಿಲಿಗೆ ಪಿಂಚಣಿ ಆದೇಶವನ್ನು ತಲುಪಿಸಲಾಗುವುದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.