logo
WhatsApp Image 2026-04-02 at 14.46.04.jpeg
hindalco everlast.jpeg

ಹೆಮ್ಮಾಡಿ: ಭರತನಾಟ್ಯ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜನತಾ ಕಾಲೇಜಿನ ಅಲಕಾ ಹೆಬ್ಬಾರ್.

ಟ್ರೆಂಡಿಂಗ್
share whatsappshare facebookshare telegram
10 Feb 2024
post image

ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಧಾರವಾಡದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಪ್ರಥಮ ಸ್ಥಾನ ಪಡೆದಿರುತ್ತಾಳೆ.

ಪದವಿ ಪೂರ್ವ ವಿಭಾಗದಿಂದ ಭರತನಾಟ್ಯ ಸ್ಪರ್ಧೆಗೆ ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿಯಾಗಿದ್ದು, ಅಲಕಾ ಹೆಬ್ಬಾರ್ ಕಾಲೇಜಿನ ಸಾಂಸ್ಕೃತಿಕ ತಂಡದ ಉದಯೋನ್ಮುಖ ಪ್ರತಿಭೆ ಇದುವರೆಗೆ ನಡೆದ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭರತನಾಟ್ಯ ಪ್ರದರ್ಶನ ಮಾಡಿರುತ್ತಾಳೆ ಹಾಗೂ ಸಾಕಷ್ಟು ಬಹುಮಾನಗಳನ್ನು ಪಡೆದಿರುತ್ತಾಳೆ.

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.