



ಇಂದಿನಿಂದ (ಏಪ್ರಿಲ್ 25), ನೀವು ನಾಲ್ಕು ಫೋನ್‌ಗಳಲ್ಲಿ ಒಂದೇ ವಾಟ್ಸ್ಆ್ಯಪ್ ಖಾತೆಗೆ ಲಾಗ್ ಇನ್ ಮಾಡಿಕೊಳ್ಳಬಹುದು ಎಂದು ಮೆಟಾ ಸಿಇಒ ಮಾರ್ಕ್ ಝುಕರ್ಬರ್ಗ್ ತಿಳಿಸಿದ್ದಾರೆ.
ಒಂದು ವಾಟ್ಸ್ಆ್ಯಪ್ ಖಾತೆಯನ್ನು ಮೊಬೈಲ್, ಲ್ಯಾಪ್ಟಾಪ್, ಡೆಸ್ಕ್ ಟಾಪ್ ಗಳಲ್ಲಿ ಬಳಸಲು ಅವಕಾಶವಿತ್ತು. ಆದರೆ ಒಂದಕ್ಕಿಂತ ಹೆಚ್ಚು ಸ್ಮಾರ್ಟ್ ಫೋನುಗಳಲ್ಲಿ ಬಳಸಲು ಈವರೆಗೆ ಅವಕಾಶವಿರಲಿಲ್ಲ. ಇದೀಗ ಮೆಸೇಜಿಂಗ್ ಆ್ಯಪ್ ಹೊಸ ಆಯ್ಕೆಯನ್ನು ಬಳಕೆದಾರರಿಗೆ ನೀಡಿದ್ದು, ಒಂದೇ ಬಾರಿಗೆ ನಾಲ್ಕು ಫೋನುಗಳಲ್ಲಿ ಒಂದೇ ವಾಟ್ಸ್ಆ್ಯಪ್ ಖಾತೆಯನ್ನು ಬಳಸಬಹುದಾಗಿದೆ. ಈ ವಿಚಾರವಾಗಿ ವಾಟ್ಸ್ಆ್ಯಪ್ ಒಡೆತನ ಹೊಂದಿರುವ ಮೆಟಾ ಸಿಇಒ ಮಾರ್ಕ್ ಝುಕರ್ಬರ್ಗ್ ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿದ್ದಾರೆ. ಇಂದಿನಿಂದ, ನೀವು ನಾಲ್ಕು ಫೋನ್‌ಗಳಲ್ಲಿ ಒಂದೇ ವಾಟ್ಸ್ಆ್ಯಪ್ ಖಾತೆಗೆ ಲಾಗ್ ಇನ್ ಮಾಡಿಕೊಳ್ಳಬಹುದು ಎಂದು ಅವರು ಉಲ್ಲೇಖಿಸಿದ್ದಾರೆ.
ಬೇರೆ ಫೋನಿನಲ್ಲಿ ವಾಟ್ಸ್ಆ್ಯಪ್ ಖಾತೆ ಬಳಸಬೇಕಿದ್ದರೆ ಹೊಸದಾಗಿ ಇನ್ಸ್ಟಾಲ್ ಮಾಡಿಕೊಳ್ಳಬೇಕು. ನಂತರ ಖಾತೆ ಸೆಟಪ್ ಮಾಡುವಾಗ ಫೋನ್ ನಂಬರ್ ನಮೂದಿಸುವ ಬದಲು ಅಸ್ತಿತ್ವದಲ್ಲಿರುವ ಖಾತೆ ಆಯ್ಕೆಯನ್ನು ಆಯ್ದುಕೊಳ್ಳಬೇಕು. ಆಗ ಕ್ಯುಆರ್ ಕೋಡ್ ಕಾಣಿಸುತ್ತದೆ. ನಂತರ ನೀವು ಈಗಾಗಲೇ ವಾಟ್ಸ್ಆ್ಯಪ್ ಖಾತೆ ಹೊಂದಿರುವ ಫೋನಿನಿಂದ ಸ್ಕ್ಯಾನ್ ಮಾಡುವ ಮೂಲಕ ಲಾಗಿನ್ ಆಗಬಹುದು. ಹೊಸ ಆಯ್ಕೆಯು iOS ಮತ್ತು ಸ್ಮಾರ್ಟ್ ಫೋನ್ ಗಳಲ್ಲಿ ಲಭ್ಯವಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.