logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ ಉತ್ಸವ ಉದ್ಘಾಟನಾ ಸಮಾರಂಭದ ಅತಿಥಿಗಳ ಸಂಕ್ಷಿಪ್ತ ವಿವರ ಇಲ್ಲಿದೆ ನೋಡಿ

ಟ್ರೆಂಡಿಂಗ್
share whatsappshare facebookshare telegram
9 Mar 2022
post image
  ಉಡುಪಿ, : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ 

ಉಡುಪಿ ಜಿಲ್ಲೆ ಇವರ ವತಿಯಿಂದ ಕಾರ್ಕಳ ಉತ್ಸವ-2022 ಇದರ ಉದ್ಘಾಟನಾ ಸಮಾರಂಭವು ಮಾರ್ಚ್ 10 ರಂದು ಸಂಜೆ 4.30 ಕ್ಕೆ ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ, ಸಂಸದ ಬಿ.ವೈ. ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಬಿ.ಎಂ. ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ. ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಮಣಿರಾಜ್ ಶೆಟ್ಟಿ, ಕಾರ್ಕಳ ಪುರಸಭೆ ಅಧ್ಯಕ್ಷೆ ಸುಮಾ ಕೇಶವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಡಾ. ಎನ್.ಮಂಜುಳಾ, ಬೆಂಗಳೂರು ಬಿ.ಬಿ.ಎಂ.ಪಿ ವಿಶೇಷ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಪ್ರಕಾಶ್ ಜಿ.ಟಿ ನಿಟ್ಟಾಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ ಹಾಗೂ ಮತ್ತಿತರರು ಭಾಗವಹಿಸಲಿರುವರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.