



ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತದ ಅಬ್ಬರದ ಮಧ್ಯೆ ಕರ್ನಾಟಕಕ್ಕೆ ಮುಂಗಾರಿನ ಮೇಘಸ್ಫೋಟದ ಮುನ್ಸೂಚನೆ ಸಿಕ್ಕಿದೆ.
ವಾರಾಂತ್ಯದಲ್ಲಿ ಬೆಂಗಳೂರಿನಲ್ಲಿ ವರುಣಾರ್ಭಟದ ಹೈಅಲರ್ಟ್ ಘೋಷಿಸಿಲಾಗಿದೆ. ಜೂನ್ 18ರ ಬಳಿಕ ಮುಂಗಾರು ಪ್ರಬಲವಾಗಲಿದ್ದು, ಜೂನ್ 21ರ ವರೆಗೆ ಮಳೆಯಾಗಲಿದೆ, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾರ್ಭಟ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 18, 19ರಂದು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ. 2-3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಿದ್ದು, 65-110 ಎಂಎಂ ಮಳೆಯಾಗುವ ಸಾಧ್ಯತೆಯಿದೆ. ಜೂನ್ 18 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಹಾಸನ, ಮಂಡ್ಯ ಹಾಗೂ ಜೂನ್ 19 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರಿಗೆ ಭಾರೀ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ 39 ಡಿಗ್ರಿ, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.