



ಬೆಂಗಳೂರು: ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗೆ 12 ವಾರ ಗಡುವು ನೀಡಿ ಸರಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯದ ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳ ಅವಧಿ ಈಗಾಗಲೇ ಪೂರ್ಣಗೊಂಡು →ವರುಷವೇ ಕಳೆದಿದೆ. ಇವುಗಳಿಗೆ ಚುನಾವಣೆ ನಡೆಸಲು ಆಯೋಗವು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಶೀಘ್ರ ಚುನಾವಣೆ ನಡೆಸದೇ ಹೋದಲ್ಲಿ ಆಯೋಗ ಇಷ್ಟು ದಿನ ನಡೆಸಿರುವ ಎಲ್ಲ ಸಿದ್ಧತೆಗಳೂ ವ್ಯರ್ಥವಾಗಲಿವೆ' ಎಂಬ ಅಂಶವನ್ನು ನ್ಯಾಯಪೀಠಕ್ಕೆ ಆಯೋಗವು ತಿಳಿಸಿದೆ.ರಾಜ್ಯದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ರೀತಿಯ ಮೀಸಲಾತಿಯನ್ನು 12 ವಾರದೊಳಗೆ ಮರು ನಿಗದಿಪಡಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.