



ಚಿತ್ರದುರ್ಗ: ಹೈಕೋರ್ಟ್ ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ.
ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ, ಮತ್ತು ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಬುಧವಾರ ಕೋರ್ಟ್ ಆದೇಶ ಹೊರಡಿಸಲಾಗಿದೆ.
ಇತ್ತೀಚೆಗೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್ವೆಲ್ಗೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ಪ್ರಶ್ನಸಿ ಶರಣ್ ಪಂಪ್‌ವೆಲ್ ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಕೆಲ ಷರತ್ತು ವಿಧಿಸಿ ಜಿಲ್ಲಾಡಳಿತದ ನಿರ್ಬಂಧವನ್ನು ಹೈಕೋರ್ಟ್ ತೆರವುಗೊಳಿಸಿತ್ತು.
ಸೆ.13ರಂದು ಮಹಾಗಣಪತಿ ಶೋಭಾಯಾತ್ರೆ ವೇಳೆ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಅಂದು ಬೆಳಗ್ಗೆ 10:30 ರಿಂದ 12:30ರ ವರೆಗೆ ದರ್ಶನಕ್ಕೆ ಕೋರ್ಟ್ ಅವಕಾಶ ಕಲ್ಪಿಸಿತ್ತು. ಆದ್ರೆ ಪಂಪ್‌ವೆಲ್ 12:45ರ ವರೆಗೆ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದರು. ಅಲ್ಲದೇ ಶೋಭಾಯಾತ್ರೆಯಲ್ಲಿ ಭಾಷಣ ಕೂಡ ಮಾಡಿದ್ದರು. ಇದರಿಂದ ಆದೇಶ ಉಲ್ಲಂಘನೆ ಬಗ್ಗೆ ಪೊಲೀಸರು ಹೈಕೋರ್ಟ್ ಗಮನಕ್ಕೆ ತಂದಿದ್ದರು. ಬಳಿಕ ಆದೇಶ ಉಲ್ಲಂಘಿಸಿದ್ದಕ್ಕೆ ಹೈಕೋರ್ಟ್ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.