



ಆರಂಭದಿಂದಲೂ ತೀವ್ರ ವಿವಾದ ಮತ್ತು ವಿರೋಧಕ್ಕೆ ಗುರಿಯಾಗಿದ್ದ ಆದಿಪುರುಷ ಚಿತ್ರ ತಂಡಕ್ಕೆ ಇದೀಗ ಅಲಹಾಬಾದ್ ಹೈಕೋರ್ಟ್ ಚಾಟಿ ಬೀಸಿದೆ.
ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿದೆ. ‘ಭಾರತೀಯರು ಸಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿದೆ.
ಪಾತ್ರದ ಚಿತ್ರಣ ಮತ್ತು ಸಂಭಾಷಣೆ ಮೂಲಕ ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡುವ ಆದಿಪುರುಷ ಚಿತ್ರವನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್, ಚಿತ್ರದ ನಿರ್ದೇಶಕ ಓಂ ರಾವತ್ರನ್ನು ತರಾಟೆಗೆ ತೆಗೆದುಕೊಂಡಿದೆ.
ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿದೆ. ಈ ಎಲ್ಲ ಪ್ರಶ್ನೆಗಳಿಗೆ ಒಂದು ವಾರದಲ್ಲಿ ಉತ್ತರಿಸುವಂತೆ ಕೋರ್ಟ್ ನಿರ್ದೇಶಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.