logo
WhatsApp Image 2026-04-02 at 14.46.04.jpeg
hindalco everlast.jpeg

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ

ಟ್ರೆಂಡಿಂಗ್
share whatsappshare facebookshare telegram
23 Mar 2023
post image

ಬೆಂಗಳೂರು : ಸರ್ಕಾರಿ ನೌಕರರ ಸಮಾನ ವೇತನಕ್ಕಾಗಿ ಆಗ್ರಹಿಸಿ ಸಾರಿಗೆ ನೌಕರರು ಮಾ.24 ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಈ ಹಿನ್ನೆಲೆ ಸಾರಿಗೆ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು, ಇದೀಗ ಹೈಕೋರ್ಟ್ ಮುಷ್ಕರಕ್ಕೆ ತಡೆ ಹಾಕಿದ್ದು, ಮುಂದಿನ 2 ವಾರ ಯಾವುದೇ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ.

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಸಿ.ಜೆ ಪ್ರಸನ್ನ, ಬಿ ವರಾಳೆ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. 3 ವಾರ ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಸೂಚನೆ ನೀಡಿದೆ.

ಈ ಹಿಂದೆ ಮಾರ್ಚ್ 21ರಂದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ 15% ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಮುಷ್ಕರ ಹಿಂಪಡೆಯಲಾಗಿತ್ತು. ಆದರೆ ಬಳಿಕ ಸಮಾನ ವೇತನಕ್ಕಾಗಿ ಆಗ್ರಹಿಸಿ ಸಾರಿಗೆ ನೌಕರರು ಮಾ.24 ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕು ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರು ನೇಮಕಾತಿ ಮಾಡಿಕೊಳ್ಳುವುದು. ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದು. ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಗಿತ್ತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.