



ವಿಟ್ಲ: ಕೆಲಸ ದ ಒತ್ತಡದಿಂದ ಸರ್ಕಾರಿ ಪ್ರೌಢಶಾಲಾ ಶಿಕ್ಷಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ವಿಟ್ಲದಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ವಿಟ್ಲ ನಿವಾಸಿ ಪ್ರಿಯಾ ಕುಮಾರಿ (48) ಮೃತ ದುರ್ದೈವಿ. ಇವರು ಕಳೆದ ಹನ್ನೆರಡು ವರ್ಷಗಳಿಂದ ಪುತ್ತೂರಿನ ಹಾರಾಡಿ ಶಾಲೆಯಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು.
ಇತ್ತೀಚೆಗೆ ಅವರನ್ನು ಪಾಪೆಮಜಲು ಪ್ರೌಢಶಾಲೆಗೆ ವರ್ಗಾಯಿಸಲಾಗಿತ್ತು. ಶುಕ್ರವಾರ ಪಾಪೆಮಜಲು ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಆದರೆ, ಡಿ.13 ರಂದು ಬೆಳಿಗ್ಗೆ ವಿಟ್ಲ ಸಿಪಿಸಿಅರ್ ಐ ಬಳಿ ಇರುವ ತನ್ನ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ತಕ್ಷಣವೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ. ಕೆಲಸದ ಒತ್ತಡವೇ ಆತ್ಮಹತ್ಯೆಗೆ ಕಾರಣ ಇರಬಹುದು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ಮೃತರ ಪತಿ ನಿವೃತ್ತ ಯೋಧರಾಗಿದ್ದು, ಪ್ರಸ್ತುತ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ. ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.