



ನವದೆಹಲಿ: ಕರ್ನಾಟಕ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿವುದನ್ನು ನಿಷೇಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಹೋಳಿ ಹಬ್ಬದ ಬಳಿಕ ಅರ್ಜಿ ಯನ್ನು ವಿಚಾರಣೆಗೆ ಲಿಸ್ಟ್ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತಕ್ಷಣ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ಕೆಲವು ವಿದ್ಯಾರ್ಥಿನಿಯರು ಮನವಿ ಮಾಡಿದ್ದರು.
ಈ ಹಿಂದೆ ರಾಜ್ಯ ಹೈಕೋರ್ಟ್ ರಾಜ್ಯ ಸರ್ಕಾರ ಹಿಜಾಬ್ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.