



ಉಡುಪಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಅಜ್ಜರಕಾಡು ಮಹಿಳಾ ಪದವಿ ಕಾಲೇಜು, ಉಡುಪಿ ಎಂಜಿಎಂ ಕಾಲೇಜು ಹಾಗೂ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಹಲವು ಕಾಲೇಜುಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚ್ಚೇಂದ್ರ ಹಾಕೆ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು. ಹಿಜಾಬ್ ವಿಚಾರದಲ್ಲಿ ವಿವಾದ ಉಂಟಾದ ಕೆಲವು ಸೂಕ್ಷ್ಮ ಪ್ರದೇಶಗಳ ಕಾಲೇಜುಗಳಿಗೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ ಎಂದು ಎಸ್ಪಿ ಅಕ್ಷಯ್ ಎಂ ಹಾಕೆ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.