logo
WhatsApp Image 2026-04-02 at 14.46.04.jpeg
hindalco everlast.jpeg

ಹಿಜಾಬ್ ಕೇಸರಿ ವಿವಾದ: ವಿಚಾರಣೆ ನಾಳೆಗೆ ಮುಂದುಡಿದ ಹೈಕೋರ್ಟ್ ,ನಾಳೆಯಿಂದ ಪ್ರೌಢಶಾಲೆ ಹಾಗೂ ಕಾಲೇಜು ಗಳಿಗೆ ರಜೆ ಘೋಷಣೆ. ಶಾಂತಿ ಕಾಪಾಡುವಂತೆ ಸಿ.ಎಂ ಮನವಿ

ಟ್ರೆಂಡಿಂಗ್
share whatsappshare facebookshare telegram
8 Feb 2022
post image

ಬೆಂಗಳೂರು: ನಾಳೆಯಿಂದ 3 ದಿನ ಹೈ ಸ್ಕೂಲ್‌, ಪ.ಪೂರ್ವ, ಪದವಿ ಎಂಜಿನಿಯರ್‌ ಕಾಲೇಜುಗಳಿಗೆ ರಜೆ ನೀಡಲಾಗುವುದು ಅಂತ ಸಚಿವ ಅಶ್ವತ್‌ ನಾರಾಯಣ್‌ ತಿಳಿಸಿದ್ದಾರೆ. ಈ ಬಗ್ಗೆ ಅವರು ಸುದ್ದಿಗಾರರ ಜೊತೆಗೆ ಮಾತನಾಡುತ್ತ ಮಾಹಿತಿ ನೀಡಿದರು. ನಾಳೆಯಿಂದ 3 ದಿನ ಹೈ ಸ್ಕೂಲ್‌, ಪ.ಪೂರ್ವ, ಪದವಿ ಎಂಜಿನಿಯರ್‌ ಕಾಲೇಜುಗಳಿಗೆ ರಜೆ ನೀಡಲಾಗುವುದು ಅವರು ಹೇಳಿದರು.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ, ಶಾಲಾ ಕಾಲೇಜುಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಜೆ ಘೋಷಣೆ ಮಾಡಲಾಗಿದೆ ಎಂದರು

ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆ ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

ಹಿಜಾಬ್ ಧರಿಸಿಲು ಅನುಮತಿ‌ ಕೋರಿ ಸಲ್ಲಿಸಲಾಗಿದ್ದ ಅರ್ಜಿ‌ ವಿಚಾರಣೆಯನ್ನು‌ ನಾಳೆ (ಫೆ.9) ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.