logo
WhatsApp Image 2026-04-02 at 14.46.04.jpeg
hindalco everlast.jpeg

ಹಿರಿಯಡ್ಕ: ಅಂಜಾರು ಗ್ರಾಮದಲ್ಲಿ ಸಾಲದ ಭಾದೆಯಿಂದ ಮನನೊಂದ ಪಿಗ್ಮಿ ಕಲೆಕ್ಟರ್ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
9 Oct 2022
post image

ಹಿರಿಯಡ್ಕ:

ಸಾಲದ ಭಾದೆಯಿಂದ ಮಾನಸಿಕವಾಗಿ ನೊಂದ ಪಿಗ್ಮಿ ಕಲೆಕ್ಟರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಜಾರು ಗ್ರಾಮದ ಕಾಜರಗುತ್ತು ಎಂಬಲ್ಲಿ ನಡೆದಿದೆ. ಕಾಜರಗುತ್ತು ಶ್ರೀನಿವಾಸ ನಗರದ ನಿವಾಸಿ 43ವರ್ಷದ ಗಣೇಶ ಶೇರಿಗಾರ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಪಿಗ್ಮಿ ಕಲೆಕ್ಟರ್ ಕೆಲಸ ಮಾಡುತ್ತಿದ್ದರು. ಸಾಲದ ಹೊರೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ಸಮಯ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.