logo
WhatsApp Image 2026-04-02 at 14.46.04.jpeg
hindalco everlast.jpeg

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
5 Jul 2023
post image

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧ್ಯಂತ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 6 ರವರೆಗೆ ಅರೆಂಜ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.6ರ ಗುರುವಾರ ರಜೆ ಘೋಷಿಸಲಾಗಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ತಗ್ಗು ಪ್ರದೇಶದ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿ ಇರಬೇಕೆಂದು ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.