logo
WhatsApp Image 2026-04-02 at 14.46.04.jpeg
hindalco everlast.jpeg

ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸಾವು

ಟ್ರೆಂಡಿಂಗ್
share whatsappshare facebookshare telegram
13 Sept 2023
post image

ಮಂಗಳೂರು: ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ನಂದಿಕೂರು ಮುದರಂಗಡಿ ಜಂಕ್ಷನ್ ಬಳಿ ಸೆ.೧೩ರಂದು ನಡೆದಿದೆ.

ಕಾರ್ಕಳ ತಾಲೂಕಿನ ಅಜೆಕಾರು ಸಮೀಪದ ಬೊಂಡುಕುಮೇರಿಯ ಆಶ್ರಯ ನಿಲಯ ನಿವಾಸಿಯಾದ ಬೈಕ್ ಸವಾರ ಅಶ್ವಿತ್ ಶೆಟ್ಟಿ ಮೃತಪಟ್ಟ ವ್ಯಕ್ತಿಯಾಗಿದ್ದು, ತನ್ನ ಹೊಸ ಬೈಕ್ ಸರ್ವೀಸ್ ಮಾಡಲು ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಶ್ವಿತ್ ಶೆಟ್ಟಿ ತನ್ನ ಬೈಕಿನಲ್ಲಿ ಪಡುಬಿದ್ರೆ ಮಾರ್ಗವಾಗಿ ನಂದಿಕೂರು ಮುದರಂಗಡಿ ಜಂಕ್ಷನ್ ಬಳಿ ಹೋಗುತ್ತಿದ್ದ ವೇಳೆ ಮುಂದಿನಿಂದ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡುವಾಗ ಎದುರಿನಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಅಶ್ವಿತ್ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.