

ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಅವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಮಧ್ಯಾಹ್ನ ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್‌ನಲ್ಲಿ ನಡೆದಿದೆ.
ಮೃತರು ಬಿಜೆಪಿ ಮುಖಂಡ ಮಂಜು ಕೊಳ ಅವರ ಪತ್ನಿಯಾಗಿದ್ದು, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತಕ್ಕೆ ಕಾರಣವಾದ ಬಸ್ ಹಾಗೂ ಚಾಲಕರ ಕುರಿತು ತನಿಖೆ ಆರಂಭಿಸಲಾಗಿದೆ.
ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ರಸ್ತೆ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವಂತೆ ಆಗ್ರಹಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.