



ಬ್ರಹ್ಮಾವರ:
ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ. ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನು ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ. ಗಾಯಗೊಂಡ ಲಾರಿ ಚಾಲಕನನ್ನು ಕುಮಟದ ಕದಗಲ್ ಮೂಲದ ಮಹೇಶ್ ಗೌಡ ಹಾಗೂ ಬೈಕ್ ಸವಾರನನ್ನು ಹರೀಶ್ ಎಂದು ಗುರುತಿಸಲಾಗಿದೆ. ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿಹೊಡೆದು, ರಸ್ತೆ ಬದಿಯ ದಾರಿದೀಪದ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಹಾಗೂ ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ಉಪ್ಪೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧ ತಾಸುಕ್ಕಿಂತಲೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.