



ಉಡುಪಿ: ಭೀಕರ ಅಪಘಾತವೊಂದರಲ್ಲಿ ಐದು ವರ್ಷದ ಬಾಲಕಿ ಸಹಿತ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ಅಪಘಾತ ಸಂಭವಿಸಿದ್ದು, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಕುಂದಾಪುರ ಮೂಲದ 32 ವರ್ಷದ ಗೀತಾ, 60ವರ್ಷದ ಶಾರದಾ ಮತ್ತು 5 ವರ್ಷದ ಬಾಲಕಿ ಧೃತಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಾಗೇಶ (65), ದಯಾನಂದ (66), ಸುಧೀಂದ್ರ (35) ಎಂಬವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒಂದೇ ಕುಟುಂಬದ ಸದಸ್ಯರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಕಾರು ಢಿಕ್ಕಿಯಾಗಿ ಅಪಘಾತ ನಡೆದಿದೆ ಎನ್ನಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.