



ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸಹಿತ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಅಲೆವೂರು ಆದರ್ಶನಗರ ನಿವಾಸಿ 19ವರ್ಷದ ವರುಣ್ ಕೊಡಂಚ ಮತ್ತು 19ವರ್ಷದ ಕಾರ್ತಿಕ್ ಪೂಜಾರಿ ಬಂಧಿತ ಆರೋಪಿಗಳು. ಇವರು ಫೆ.18ರಂದು ರಾತ್ರಿ ಶಿವಳ್ಳಿ ಗ್ರಾಮದ ನೆಹರು ನಗರದ ಮನೆಯೊಂದಕ್ಕೆ ನುಗ್ಗಿ ಕಪಾಟಿನೊಳಗೆ ಇದ್ದ 2.40 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆಗೆ ಇಳಿದ ಪೊಲೀಸರು, ಇಬ್ಬರು ಅಪ್ರಾಪ್ತ ಬಾಲಕರು ಸಹಿತ ಒಟ್ಟು ನಾಲ್ವರು ಆರೋಪಿಗಳನ್ನು ಪೆರಂಪಳ್ಳಿ ಶೀಂಬ್ರಾ ಕ್ರಾಸ್ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರಿಂದ 2.40 ಲಕ್ಷ ಚಿನ್ನಾಭರಣ, 1 ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 1 ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.