



ಉಡುಪಿ: ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿಯ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದ ನಿವೇಶನವಿರುವ ವಸತಿ ರಹಿತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆ. 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ, ರಜತಾದ್ರಿ ಮಣಿಪಾಲ ಕಚೇರಿಯನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.