logo
WhatsApp Image 2026-04-02 at 14.46.04.jpeg
hindalco everlast.jpeg

ಪ್ರಧಾನಿ ನಿವಾಸದ ಎದುರು ಕಾಂಗ್ರೆಸ್ ಭಾರೀ ಪ್ರತಿಭಟನೆ: ರಾಹುಲ್ ಗಾಂಧಿ ಸೇರಿ ಹಲವು ನಾಯಕರು ವಶಕ್ಕೆ

ಟ್ರೆಂಡಿಂಗ್
share whatsappshare facebookshare telegram
21 Jul 2026
post image

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಮತ್ತು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ರಾಹುಲ್ ಗಾಂಧಿ ಅವರೊಂದಿಗೆ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದ ಎದುರು ಧರಣಿ ನಡೆಸಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯಕ್ಕೆ ಪ್ರಧಾನಿ ಉತ್ತರ ನೀಡಬೇಕು. ದೇಶದ ಯುವಜನರ ಭವಿಷ್ಯವನ್ನು ಹಾಳು ಮಾಡಿದ ಕಾರಣ ಪ್ರಧಾನಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು"* ಎಂದು ಒತ್ತಾಯಿಸಿದರು.

ಪ್ರಧಾನಿ ನಿವಾಸವು ಭದ್ರತಾ ವಲಯದಲ್ಲಿರುವ ಹಿನ್ನೆಲೆಯಲ್ಲಿ ಧರಣಿ ಅಂತ್ಯಗೊಳಿಸುವಂತೆ ಪೊಲೀಸರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು. ಆದರೆ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಇದಕ್ಕೂ ಮುನ್ನ ಸೋಮವಾರ, ಪ್ರತಿಭಟನೆಯ ವೇಳೆ ಗಾಯಗೊಂಡಿದ್ದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದೆಹಲಿಯ ರಾಮ ಮನೋಹರ್ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವೇಳೆ ಸೋಮವಾರ ಪೊಲೀಸರು ಕ್ರಮ ಕೈಗೊಂಡಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.