



ಬೆಂಗಳೂರು:ಇದೀಗ ಮತ್ತೊಂದು ಚಂಡಮಾರುತ ದಕ್ಷಿಣ ಭಾರತಕ್ಕೆ ಅಪ್ಪಳಿಸಲು ಸಜ್ಜಾಗಿದ್ದು, ಈ ಚಂಡಮಾರುತಕ್ಕೆ ಜವಾದ್ ಚಂಡಮಾರುತ ಎಂದು ಹೆಸರಿಡಲಾಗಿದೆ. ಈ ಜವಾದ್ ಚಂಡಮಾರುತ ಮುಂದಿನ ವಾರ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಇನ್ನೂ 4-5 ದಿನ ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಪುದುಚೆರಿ, ಗೋವಾ, ಒರಿಸ್ಸಾ, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಏಳುವ ಸೂಚನೆಗಳಿವೆ. ಮುಂಬರುವ ದಿನಗಳಲ್ಲಿ ಗೋವಾ, ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇರಳ, ಕರಾವಳಿ ಕರ್ನಾಟಕ, ಕರಾವಳಿ ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳಲ್ಲಿ ಮಳೆಯಾಗಬಹುದು ಎಂದು ತಿಳಿಸಿದೆ. ಇನ್ನು ಜವಾದ್ ಚಂಡಮಾರುತದ ಪರಿಣಾಮ ಒರಿಸ್ಸಾದಲ್ಲಿ ಹೆಚ್ಚಾಗಿರಲಿದೆ. ಎಂಡಿ ಪ್ರಕಾರ ಗೋವಾ, ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇರಳದಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳವರೆಗೆ ಭಾರೀ ಮಳೆಯಾಗಬಹುದು. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಅಕ್ಟೋಬರ್ 10ರಿಂದ ಅಕ್ಟೋಬರ್ 12ರ ನಡುವೆ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.