



ಕ್ಷುಲ್ಲಕ ವಿಚಾರಕ್ಕಾಗಿ ದಂಪತಿಗಳ ಮಧ್ಯೆ ಜಗಳ ನಡೆದು ಕೊನೆಗೆ ಸಾವಿನೊಂದಿಗೆ ಅಂತ್ಯ ಕಂಡಿರುವ ಹೃದಯ ವಿಧ್ರಾವಕ ಘಟನೆ ಜೂ. 25ರಂದು ಕಾರ್ಕಳ ತಾಲೂಕು ನಲ್ಲೂರಿನಲ್ಲಿ ನಡೆದಿದೆ. ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ದಿ (40. ವ ) ಹಾಗೂ ಯಶೋಧಾ (32. ವ ) ಸಾವಿಗೀಡಾದ ದಂಪತಿ.
ಜೂ.25ರಂದು ಬೆಳಿಗ್ಗೆ ಟಿವಿ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದರು. ಯಶೋಧಾರನ್ನು ರಕ್ಷಿಸಲು ತೆರಳಿದ್ದ ಪತಿ ಇಮ್ಯಾನುಲ್ ಕೂಡ ನೀರುಪಾಲಾದರು ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್, ಯಶೋಧಾ ದಂಪತಿ ನಲ್ಲೂರಿನ ತೋಟವೊಂದರಲ್ಲಿ ಕೆಲಸಕ್ಕಿದ್ದರು. ದಂಪತಿ ಸಾವಿನಿಂದ ಇದೀಗ 10 ವರ್ಷದ ಪುತ್ರ ಹಾಗೂ 9 ವರ್ಷದ ಪುತ್ರಿ ಅನಾಥರಾಗಿದ್ದಾರೆ.
ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ, ಗ್ರಾಮಾಂತರ ಪೊಲೀಸ್ ಠಾಣೆ ಎಸ್‌ಐ ತೇಜಸ್ವಿ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.