



ಉಡುಪಿ: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಾದರೆ ನಾನು
ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ.
ಯಾವುದೇ ಪಕ್ಷದಿಂದ ಸ್ಪರ್ಧಿಸುವುದಿಲ್ಲ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.
ಸ್ಪರ್ಧಿಸುವ ಕುರಿತು ಎರಡು ಮೂರು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು
ಉಡುಪಿಯಲ್ಲಿ ಬುಧವಾರ ಮಾಧ್ಯಮ ಜತೆ
ಮಾತನಾಡಿದ ಅವರು ನುಡಿದರು.
ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನಗೆ ಒತ್ತಡ ಬರುತ್ತಿರುವುದು ನಿಜ. ಇದು ಪಕ್ಷಗಳ ಮಧ್ಯೆ ನಡೆಯುವ ಚುನಾವಣೆಯಾಗಿದೆ. ನಾನು ಎಲ್ಲ ಪಕ್ಷಗಳ ಮಧ್ಯೆ ಇದ್ದೇನೆ. ಹಾಗಾಗಿ ಸ್ಪರ್ಧಿಸುವ ಬಗ್ಗೆ ಆಲೋಚನೆ ಮಾಡಬೇಕಾಗಿದೆ. ನಾಮಪತ್ರ ಸಲ್ಲಿಸುವುದಿದ್ದರೆ ಕೊನೆಯ ದಿನವಾದ ನ.17ಕ್ಕೆ ಸಲ್ಲಿಸುತ್ತೇನೆ ಎಂದರು.
ಸಹಕಾರಿ ಕ್ಷೇತ್ರಕ್ಕೆ ವಿಧಾನ ಪರಿಷತ್ತಿನಲ್ಲಿ ಕನಿಷ್ಟ ಎರಡು ಸ್ಥಾನವನ್ನಾದರೂ ನೀಡಬೇಕು ಎಂದು ಅವರು ಆಗ್ರಹಿಸಿದರು.
ಪಕ್ಷಗಳಿಂದ ಆಹ್ವಾನ ಬಂದರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದವರು ನನ್ನನ್ನು ಕರೆಯುತ್ತಾರೆ. ಆದರೆ ಹೋಗಬೇಕೆ ಬೇಡವೇ ಎಂಬುದು ನನ್ನ ಇಷ್ಟ. ಆದರೆ ನಾನು ಯಾವುದೇ ಪಕ್ಷದಡಿಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದರು. ಕಾ
ನವೋದಯ ಸದಸ್ಯರು, ಗ್ರಾಪಂ ಸದಸ್ಯರು ಹಾಗೂ ಸಹಕಾರಿಗಳು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಇರುವ ಶೇ.50ರಷ್ಟು ಮಂದಿ ಗ್ರಾಪಂ ಸದಸ್ಯರುಗಳಾಗಿದ್ದಾರೆ. ಇದರಲ್ಲಿ ಶೇ.30ರಷ್ಟು ಮಂದಿ ಮಹಿಳೆಯರು ನವೋದಯ ಸೇರಿದಂತೆ ಇತರ ಗುಂಪುಗಳಿಗೆ ಸೇರಿದವರಾಗಿದ್ದಾರೆ. ಆದ್ದರಿಂದ ಇವರೆಲ್ಲರು ಸಹಕಾರಿ ಕ್ಷೇತ್ರಕ್ಕೆ ಪ್ರಾತಿನಿಧ್ಯ ಸಿಗಲಿ ಎಂಬ ಉದ್ದೇಶದಿಂದ ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ಇವರು ಸ್ಪರ್ಧೆ ಮಾಡುವಂತೆ ಹೇಳಿದ್ದರೆಯೇ ಹೊರತು ಯಾರು ಕೂಡ ಪಕ್ಷದಿಂದ ಸ್ಪರ್ಧಿಸಿ ಎಂದು ಹೇಳಿಲ್ಲ. ನಾನು ಎಲ್ಲೂ ರಾಜಕೀಯ ಮಾಡುವುದಿಲ್ಲ. ಸಹಕಾರಿ, ಬಡವರ, ಸ್ವಸಹಾಯ ಸಂಘಗಳ ಗುಂಪುಗಳ ಪರವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.