



ಮಂಗಳೂರು: ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ ಬೀದಿಗಿಳಿದು ಹೋರಾಟ ಕೈಗೆತ್ತಿಕೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇವರೆಲ್ಲರೂ ಚುನಾವಣೆಗೆ ಮುನ್ನವೇ ಗ್ಯಾರಂಟಿಗಳನ್ನು ಪ್ರಕಟಿಸಿದ್ದಲ್ಲದೆ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಅವುಗಳೆಲ್ಲವೂ ಜಾರಿಯಾಗಲಿವೆ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ, ಆದರೆ ಈಗ ಅಧಿಕಾರಕ್ಕೆ ಬಂದು 20 ದಿನಗಳಾದರೂ ಇನ್ನೂ ಯಾವುದೇ ಗ್ಯಾರಂಟಿಯೂ ಜಾರಿಗೊಂಡಿಲ್ಲ, ಕಾಂಗ್ರೆಸ್ ಜನರನ್ನು ವಂಚಿಸಿದೆ, ಸುಳ್ಳುಗಾರ ಪಾರ್ಟಿ ಎನ್ನುವುದು ಜನರಿಗೆ ಸ್ಪಷ್ಟವಾಗಿದೆ ಎಂದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.