logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲಾತಿ ಮತ್ತೆ ತರುತ್ತಾರೆ ಬಿಜೆಪಿ ಯಾವತ್ತೂ ತರಲ್ಲ - ಅಮಿತ್ ಶಾ

ಟ್ರೆಂಡಿಂಗ್
share whatsappshare facebookshare telegram
30 Apr 2023
post image

ಕಟಪಾಡಿ: ಕಾಂಗ್ರೆಸ್ ಪಕ್ಷವು ದೇಶದ ಸುರಕ್ಷತೆಯನ್ನು ವೋಟ್ ಬ್ಯಾಂಕ್ ರಾಜಕೀಯದ ಮೂಲಕ ಆಟವಾಡುತ್ತಿದೆ. ಬಿಜೆಪಿ ಪಕ್ಷವು ವೋಟ್ ಬ್ಯಾಂಕ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ. ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲಾತಿ ಮತ್ತೆ ತರುತ್ತಾರೆ ಬಿಜೆಪಿ ಯಾವತ್ತೂ ತರಲ್ಲ.

ಸಾಮಾಜಿಕ ನ್ಯಾಯದಲ್ಲಿ ಗುರುತರವಾದ ಗುರುಗಳಾಗಿ ಧರ್ಮರಕ್ಷಣೆಯನ್ನು ಮಾಡಿದವರು ನಾರಾಯಣಗುರುಗಳು. ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ ಪಿ ಎಫ್ ಐ ಬ್ಯಾನ್ ಮಾಡಿದ ಕೀರ್ತಿ ಬಿಜೆಪಿಗೆ ಇದೆ. ದಕ್ಷಿಣ ಭಾರತವನ್ನು ಸುರಕ್ಷಿತವಾಗಿಸಿದ್ದೇವೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಇಂದು ಬಿಜೆಪಿ ಅಭ್ಯರ್ಥಿ ಮತ ಪ್ರಚಾರದ ಅಂಗವಾಗಿ ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನದಲ್ಲಿ ಜರಗಿದ ಬಹಿರಂಗ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ ಪಿ ಎಫ್ ಐ ಬ್ಯಾನ್ ಮಾಡಿದ ಕೀರ್ತಿ ಬಿಜೆಪಿಗೆ ಇದೆ. ದಕ್ಷಿಣ ಭಾರತವನ್ನು ಸುರಕ್ಷಿತವಾಗಿಸಿದ್ದೇವೆ ಎಂದರು. ಈ ಸಂದರ್ಭ ಮಾಜಿ ಸಚಿವ ವಿ.ಎಸ್ ಆಚಾರ್ಯ ರನ್ನು ಸ್ಮರಿಸಿದರು.

ಕಟಪಾಡಿ ಬೂತ್ ನ ಅಧ್ಯಕ್ಷರಾದ ಶ್ರೀಧರ ಪೂಜಾರಿ ಅಮಿತ್ ಷಾ ರನ್ನು ವೇದಿಕೆಗೆ ಬರಮಾಡಿಕೊಂಡರು.

ಜಿಲ್ಲಾ ಸಮಿತಿಯ ಪರವಾಗಿ ನಾರಾಯಣಗುರುಗಳ ಮೂರ್ತಿಯನ್ನು ನೀಡಿ ಗೌರವಿಸಲಾಯಿತು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಚುನಾವಣಾ ಪ್ರಭಾರಿ ವಿಜೇಂದ್ರ ಗುಪ್ತ, ಶಾಸಕ ಲಾಲಾಜಿ ಆರ್ ಮೆಂಡನ್, ರಘುಪತಿ ಭಟ್, ಬಿಜೆಪಿ ಅಭ್ಯರ್ಥಿಗಳಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಪ್ರಮೋದ್ ಮಧ್ವರಾಜ್, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ, ದಿನಕರ ಬಾಬು, ಶ್ರೀಶ ನಾಯಕ್, ವೀಣಾ ಎಸ್ ಶೆಟ್ಟಿ, ಸುರೇಂದ್ರ ಪಣಿಯೂರು, ಸುಲೋಚನಾ ಭಟ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನಿಯನ ಗಣೇಶ್, ಉದಯಕುಮಾರ್ ಶೆಟ್ಟಿ, ನವೀನ್ ಕುತ್ಯಾರು, ಪ್ರತಾಪ್ ಸಿಂಹ ಮತ್ತಿತರರು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.