



ಬೆಂಗಳೂರು: ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 2020-21 ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪೂರ್ಣ ಶುಲ್ಕ ಪಡೆದಿದ್ದರೆ, ಹೆಚ್ಚುವರಿ ಶುಲ್ಕವನ್ನು ವಾಪಸ್ ಮಾಡುವಂತೆ ಸರ್ಕಾರ ಖಾಸಗಿ ಶಾಲೆಗಳಿಗೆ ಆದೇಶ ನೀಡಿದೆ.2020-21 ನೇ ಸಾಲಿನ ಶೇಕಡಾ 30 ರಷ್ಟು ಶುಲ್ಕ ಕಡಿತ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿದ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿತ್ತು. ಸದ್ಯ ಹೈಕೋರ್ಟ್ ಈ ಬಗ್ಗೆ ತೀರ್ಪು ನೀಡಿದ್ದು, ಶುಲ್ಕ ಪರಿಷ್ಕರಿಸಿ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆಯುವಂತೆ ಆದೇಶಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.