



ಬೆಂಗಳೂರು:: ಅನ್ನಭಾಗ್ಯ ಯೋಜನೆ ಫಲಾನುಭವಿಗಳ ಆಧಾರ್ ಕಾರ್ಡ್ , ಇ - ಕೆವೈಸಿ ಪಡೆಯಲು ಆಹಾರ ಇಲಾಖೆ ಸಜ್ಜಾಗಿದ್ದು , ಅಕ್ಟೋಬರ್ 31 ರವರೆಗೆ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಸದಸ್ಯರು ತಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಇ - ಕೆವೈಸಿ ಮಾಡಿಸಿಕೊಳ್ಳುವಂತೆ ಆಹಾರ ಇಲಾಖೆ ಸೂಚನೆ ನೀಡಿದೆ .ನ್ಯಾಯಬೆಲೆ ಅಂಗಡಿಗಳಲ್ಲಿ ಪಿಓಎಸ್ ವ್ಯವಸ್ಥೆ ಜಾರಿಯಲ್ಲಿದ್ದು, ಈ ಮೂಲಕವೇ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಬಿಪಿಎಲ್ ಕಾರ್ಡ್ ದಾರರಿಗೆ ಇ-ಕೆವೈಸಿ ಮಾಡಿಸದಿದ್ದರೆ ಪಡಿತರ ಹಂಚಿಕೆ ರದ್ದು ಮಾಡಲಾಗುವುದು. ಅನಧಿಕೃತ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಮಾಡಲು ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ. ಇ-ಕೆವೈಸಿ ಮಾಡಲು ಅ.31 ಕೊನೆ ದಿನವಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.