


ಉಡುಪಿ: ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಆಸಕ್ತ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 19 ರಿಂದ 45 ವರ್ಷದೊಳಗಿನ ಜಿಲ್ಲಾ ವ್ಯಾಪ್ತಿಯ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹ ರಕ್ಷಕದಳ ಕಚೇರಿ ದೂ.ಸಂಖ್ಯೆ: 0820-2533650 ಅಥವಾ ತಾಲೂಕು ಘಟಕಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಗೃಹರಕ್ಷಕದಳದ ಪ್ರಕಟಣೆ ತಿಳಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.