



ಕಲಬುರಗಿ:ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ
ಬಂಧಿಸಿದ್ದಾರೆ. 18 ದಿನಗಳ ಬಳಿಕ ಬಂಧನ ನಡೆದಿದೆ.
ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡವು ಪುಣೆಗೆ ತೆರಳಿ ದಿವ್ಯಾ ಹಾಗರಗಿ ಅವರನ್ನು ಬಂಧಿಸಿದೆ. ಶುಕ್ರವಾರ ಬೆಳಗ್ಗೆ ಪುಣೆಯಿಂದ ಕಲಬುರಗಿಗೆ ಅವರನ್ನು ಕರೆದುಕೊಂಡು ಬರಲಾಗುವುದು ಎಂದು ಸಿಐಡಿ ಪೊಲೀಸರು ತಿಳಿಸಿದ್ದಾರೆ
ಅರೋಪಿ ದಿವ್ಯಾ ಹಾಗರಗಿ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ತನಿಖೆಗೆ ಅಸಹಕಾರ ತೋರಿದ ಹಿನ್ನೆಲೆ ರಾಜೇಶ್ ಹಾಗರಗಿ ಅನ್ನು ಬಂಧಿಸಿದ್ದರು. ಆದರೆ ಕಳೆದ 18 ದಿನಗಳಿಂದ ದಿವ್ಯಾ ಹಾಗರಗಿ ಮಾತ್ರ ಪೊಲೀಸರಿಂದ ತಪ್ಪಿಸಿಕೊಂಡಿದ್ದರು.
ದಿವ್ಯಾ ಹಾಗರಗಿ ಒಡೆತನದ ಕಲಬುರ್ಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶೀನಾಥ, ಈ ಶಾಲೆಯ ಶಿಕ್ಷಕಿಯರಾದ ಅರ್ಚನಾ, ಸುನಂದಾ ಹಾಗೂ ಅಭ್ಯರ್ಥಿ ಶಾಂತಿಬಾಯಿಯನ್ನು ಕೂಡಾ ಬಂಧಿಸಲಾಗಿದೆ. ಹಾಗರಗಿ ಅವರ ಶಾಲೆಯಲ್ಲಿ ಅಕ್ರಮ ನಡೆದಿತ್ತು. ಕಳೆದ 18 ದಿನಗಳಿಂದ ದಿವ್ಯಾ ಹಾಗರಗಿ ಪೊಲೀಸರಿಂದ ತಪ್ಪಿಸಿಕೊಂಡಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.