



ಬೆಂಗಳೂರು: ಆ್ಯಪ್‌ನಲ್ಲಿ ಗ್ರಾಹಕರಿಗೆ ಸಾಲ ನೀಡಿದ ಬಳಿಕ ಅವರಿಗೆಚಿತ್ರಹಿಂಸೆ ನೀಡಿ ದುಬಾರಿ ಬಡ್ಡಿ ವಸೂಲಿ ಮಾಡುತ್ತಿದ್ದ ಹಿನ್ನೆಲೆ ಈ ಆ್ಯಪ್‌ಗಳ ವಿರುದ್ಧ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಈ ಪ್ರಕರಣ ಸಂಬಂಧ ಲೇವಾದೇವಿ ವ್ಯವಹಾರ ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ, ಅಧಿಕ ಬಡ್ಡಿ ನಿಷೇಧ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದು ತನಿಖೆ ನಡೆಯುತ್ತಿದೆ. ಸಾಲದ ಆ್ಯಪ್ ಕಂಪನಿಗಳ ಮಾಲೀಕರಿಗೆ ಸೇರಿದ ಬ್ಯಾಂಕ್ ಖಾತೆಯಲ್ಲಿ 106 ಕೋಟಿ ರೂ ಹಣವಿದ್ದು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಚೀನಾದ ಪ್ರಜೆಗಳ ಪರವಾಗಿ ನಕಲಿ ನಿರ್ದೇಶಕ, ಚಂದಾದಾರರನ್ನ ನೇಮಿಸಿಕೊಂಡು ಅಕ್ರಮ ವ್ಯವಹಾರ ನಡೆಸಲಾಗುತ್ತಿದೆ. ಇದರಲ್ಲಿ ಕೆಲವು ಸಂಸ್ಥೆಗಳು ಸೇರಿಕೊಂಡಿವೆ ಎಂದು ಇಡಿ ಹೇಳಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.