



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಮಣ್ಯ ದೇವಸ್ಥಾನ, ಪ್ರತಿನಿತ್ಯ ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ.
ಈ ವಾರಾಂತ್ಯದಲ್ಲಿ ಕುಕ್ಕೆ ಸುಬ್ರಮಣ್ಯ ಪ್ರವಾಸ ಕೈಗೊಳ್ಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದಿದೆ. ದೇವಾಲಯಲ್ಲಿ ದರ್ಶನ ಮತ್ತು ವಿವಿಧ ಸೇವೆಗಳು ಅರ್ಧ ದಿನದ ಕಾಲ ಲಭ್ಯವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ.
ಮಹಾತೋಭಾರ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ, ಸುಬ್ರಮಣ್ಯ, ಕಡಬ ತಾಲೂಕು ದಕ್ಷಿಣ ಕನ್ನಡ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಶ್ರೀ ದೇವಳದಲ್ಲಿ 2023-24ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂಬಂಧ ದಿನಾಂಕ 09/12/2023ರ ಶನಿವಾರ “ಮೂಲಮೃತಿಕಾ” ಪ್ರಸಾದ ತೆಗೆಯುವ ಕಾರ್ಯಕ್ರಮ ಇರುತ್ತದೆ. ಆದ್ದರಿಂದ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ. ಭಕ್ತಾದಿಗಳು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.