



ಕಾರ್ಕಳ: ಹಿಂದೂ ಸಂಸ್ಕೃತಿಯಲ್ಲಿ ನೆಮ್ಮದಿ ಕಾಣಲು ಸಾಧ್ಯ. ಈ ವಿಚಾರವನ್ನು ಜಗತ್ತೇ ಒಪ್ಪಿಕೊಂಡಿದೆ. ಹಿಂದೂ ಸಂಸ್ಕೃತಿಯಿಂದ ವಿಮುಖರಾಗಿರುವುದೇ ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ಅರಾಜಕತೆಯುಂಟಾಗಲು ಕಾರಣವಾಗಿದೆ ಎಂದ ಸುನಿಲ್ ಕುಮಾರ್ ಹಿಂದೂ ಸಂಸ್ಕೃತಿಯ ವೈಭವ, ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಿಂದೂ ಸಂಗಮದಂತಹ ಕಾರ್ಯಗಳು ನಿರಂತರವಾಗಿ ನಡೆಯಲಿ ಎಂದು ಆಶಿಸಿದರು.
ಸಾಮಾಜಿಕ, ಧಾರ್ಮಿಕ ಮುಂದಾಳು ರವೀಂದ್ರ ಶೆಟ್ಟಿ ಬಜಗೋಳಿ ಮಾತನಾಡಿ, ಹಿಂದೂ ಸಂಘಟನೆ ಕಾರ್ಯಕ್ರಮಗಳಲ್ಲಿ ಇಡೀ ಹಿಂದೂ ಸಮಾಜ ಕೈ ಜೋಡಿಸಬೇಕು. ಹಿಂದೂ ಸಂಗಮ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಕಾರ್ಕಳ ರಾಜ್ಯಕ್ಕೆ ಮಾದರಿಯಾಗಿ ಗುರುತಿಸುವಂತಾಗಬೇಕೆಂದರು.
ಸ್ವಾಭಿಮಾನಿ, ಸಂಘಟಿತ ಹಿಂದೂ ಸಮಾಜದ ನಿರ್ಮಾಣ ಮಾಡುವಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಗೋ-ಹತ್ಯೆ, ಲವ್ ಜಿಹಾದ್, ಮತಾಂತರ ಇಂದಿನ ಕಾಲದಲ್ಲೂ ನಮಗೆ ಸವಾಲಾಗುತ್ತಿದ್ದು ಇದನ್ನು ಹತ್ತಿಕ್ಕುವ ಕಾರ್ಯವಾಗಬೇಕಿದೆ ಎಂದು ಭಜರಂಗದಳ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್. ಅಭಿಪ್ರಾಯಪಟ್ಟರು.
ಡಿ. 12ರಂದು ಕಾರ್ಕಳದಲ್ಲಿ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಪ್ರತಿ ಹಿಂದೂವಿನ ಮನೆಯಿಂದ ಓರ್ವರು ಭಾಗವಹಿಸುವಂತಾಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಗ್ರಾಮ, ಬೂತ್ ಮಟ್ಟದಲ್ಲಿ ಕಾರ್ಯನಿರ್ವಹಿಸಬೇಕಿದೆ ಎಂದರು.
ವೇದಿಕೆಯಲ್ಲಿ ಪುರಸಭಾ ಅಧ್ಯಕ್ಷೆ ಸುಮಾಕೇಶವ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸುರೇಂದ್ರ ಶೆಣೈ ಉಪಸ್ಥಿತರಿದ್ದರು. ಚೇತನ್ ಪೇರಲ್ಕೆ ಸ್ವಾಗತಿಸಿ, ಸುರಕ್ಷಾ ಕಾರ್ಯಕ್ರಮ ನಿರೂಪಿಸಿದರು. ಅಶೋಕ್ ಕುಮಾರ್ ಜೈನ್ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.