



ಕಾರ್ಕಳ: ಜೀವನದಲ್ಲಿ ಮನನೊಂದು ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕುಕ್ಕುಂದೂರು ಗ್ರಾಮದ ನೆಲ್ಲಿಗುಡ್ಡೆ ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ. ಮೃತರನ್ನು ನೆಲ್ಲಿಗುಡ್ಡೆ ನಿವಾಸಿ ಶಕುಂತಳ ಎಂಬವರ ಮಗ 34ವರ್ಷದ ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ವೈದ್ಯರ ಕ್ಲಿನಿಕ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಡಿ. 13ರಂದು ಬೆಳಿಗ್ಗೆ ಬೆಂಗಳೂರಿನಿಂದ ಊರಿಗೆ ಬಂದಿದ್ದರು. ಯಾವುದೋ ಕಾರಣದಿಂದ ಮನನೊಂದು ಸುನಿಲ್ ಅವರು, ಡಿ.14ರ ರಾತ್ರಿ 8:30ರಿಂದ ಡಿ. 15ರ ಬೆಳಿಗ್ಗೆ 7:30ರ ಮಧ್ಯಾವಧಿಯಲ್ಲಿ ಮನೆಯ ಕೋಣೆಯ ಮರದ ಪಕ್ಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.